ನಿಯಮ 48 : ನೋಂದಾಯಿತ ನಿರ್ಮಾಣ ಕಾರ್ಮಿಕನ ಹಾಗು ಅವನ / ಅವಳ ಅವಲಂಭಿತರ ಪ್ರಮುಖ ಖಾಯಿಲೆಗಳ ವೆಚ್ಚಕ್ಕಾಗಿ ನೀಡುವ ವೈಧ್ಯಕೀಯ ಸಹಾಯ ಧನ

  1. ಪ್ರಮುಖ ಖಾಯಿಲೆ ಹೃದ್ರೋಗ, ಕಿಡ್ನಿ ಜೋಡಣೆ, ಕ್ಯಾನ್ಸ್ ರ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಮೂಳೆ ಶಸ್ತ್ರಚಿಕಿತ್ಸೆ, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ,ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸ್ ರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇಎನ್.ಟಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನರರೋಗ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ಹರ್ನಿಯ ಶಸ್ತ್ರಚಿಕಿತ್ಸೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಹಾಗು (ಮಂಡಳಿಯಿಂದ ಪರಿಗಣಿಸಲ್ಪಡುವ ಇತರೆ ಪ್ರಮುಖ ಖಾಯಿಲೆಗಳು)
  2. ಅರ್ಹತೆ; ಉಪನಿಯಮ 1 ರಲ್ಲಿ ನಮೂದಿಸಿರುವ ಖಾಯಿಲೆಗಳನ್ನು ಹೊಂದಿರುವ ನೋಂದಾಯಿತ ನಿರ್ಮಾಣ ಕಾರ್ಮಿಕ ಮತ್ತು ಅವನ / ಅವಳ ಅವಲಂಭಿತರು ವೆಚ್ಚದ ವೈಧ್ಯಕೀಯ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ.
  3. ಹಕ್ಕು ಸಾಧನೆ (claim)
    1. ನೋಂದಾಯಿತ ನಿರ್ಮಾಣ ಕಾರ್ಮಿಕ ಮತ್ತು ಅವನ / ಅವಳ ಅವಲಂಭಿತರು ಚಿಕಿತ್ಸಾ ಸಮಯದಲ್ಲಿ ಮೃತರಾದರೆ ವೈಧ್ಯಕೀಯ ವೆಚ್ಚದ ಸಹಾಯ ಧನವನ್ನು ಉಪ ನಿಯಮ 1 ರಂತೆ ಪಡೆಯಲು ಅರ್ಹರಾಗಿರುತ್ತಾರೆ. ಮಂಡಳಿಗೆ ನಮೂನೆ XXII ರಲ್ಲಿ ಅರ್ಜಿ ಸಲ್ಲಿಸಬೇಕು. ಆದರೆ, ಉಪನಿಯಮ 1 ರಂತೆ ವೈಧ್ಯಕೀಯ ವೆಚ್ಚದ ಸಹಾಯಧನಕ್ಕೆ ಅರ್ಹರಾಗಿರುವ ಫಲಾನುಭವಿಯು ಮಂಡಳಿಗೆ ಕರ್ನಾಟಕ ಸರ್ಕಾರಿ ನೌಕರರ (ವೈಧ್ಯಕೀಯ ಹಾಜರಾತಿ) ನಿಯಮಗಳು, 1963 ರ ಷಡ್ಯೂಲ್-1 ರಲ್ಲಿ ನಮೂದಿಸಿರುವ ಅಥವಾ ರಾಜ್ಯ ಸರ್ಕಾರದ ಯಾವುದೇ ವಿಮೆ ಯೋಜನೆ ಅಡಿಯಲ್ಲಿ ಗುರುತಿಸಲ್ಪಟ್ಟ ಆಸ್ಪತ್ರೆಗಳಲ್ಲಿ ದಾಖಲಾಗಿರುವುದಕ್ಕೆ ಸಹಾಯಕ ಸರ್ಜನ್ ಹುದ್ದೆ ಕ್ಕಿಂತ ಕಡಿಮೆ ಇಲ್ಲದ ವೈಧ್ಯರಿಂದ ವೈಧ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
    2. ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಯು ನೋಂದಾಯಿತ ನಿರ್ಮಾಣ ಕಾರ್ಮಿಕನು ಸಲ್ಲಿಸಿರುವ ವೈಧ್ಯಕೀಯ ವೆಚ್ಚದ ಸಹಾಯಧನ ಅರ್ಜಿ ಮತ್ತು ದಾಖಲೆಗಳನ್ನು ನಿಯಮಾನುಸಾರ ಪರೀಕ್ಷಿಸಿ ಸರಿಯಿದೆ ಎಂದು ಮನವರಿಕೆಯಾದರೆ ಅರ್ಜಿಯನ್ನು ಪುರಸ್ಕರಿಸಬೇಕು. ಇಲ್ಲವಾದಲ್ಲಿ, ಅರ್ಜಿದಾರರಿಗೆ ಸಾಕಷ್ಟು ಕಾಲವಕಾಶವನ್ನು ನೀಡಿ ಅರ್ಜಿಯನ್ನು ತಿರಸ್ಕರಿಸಬೇಕು.
  4. ವೈಧ್ಯಕೀಯ ವೆಚ್ಚದ ಸಹಾಯಧನದ ಮೊತ್ತ ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಯು ಗರಿಷ್ಠ ರೂ.2 ಲಕ್ಷ ದವರೆಗೂ ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಅಡಿ ಪ್ರತಿ ಸೇವೆಗೆ ಸೂಚಿಸಿರುವ ದರಗಳಿಗೆ ಅನುಗುಣವಾಗಿ ಮಂಜೂರು ಮಾಡುವುದು.